alex Certify BREAKING : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ : ಪ್ರಧಾನಿ ಮೋದಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನಂತರ ವಿಜ್ಞಾನಿಗಳನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಆಗಸ್ಟ್ 23 ರಂದು ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಕಾಲಿಟ್ಟ ಹಿನ್ನೆಲೆ ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಇನ್ನೂ, ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ( P.M Modi ) ಹೆಸರಿಟ್ಟಿದ್ದಾರೆ.
ಹೌದು. ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದರು. ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಮಾತನಾಡುವಾಗ ಅವರು ಈ ಘೋಷಣೆ ಮಾಡಿದರು.

ಚಂದ್ರಯಾನ-3 ಯಶಸ್ಸಿಗೆ ಮಹಿಳಾ ವಿಜ್ಞಾನಿಗಳ ಕೊಡುಗೆಯೂ ಇದೆ ಎಂದು ಮಹಿಳಾ ವಿಜ್ಞಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ ಎಂದು ಮೋದಿ ಹೇಳಿದರು. ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ ಎಂದು ಮೋದಿ ಹೇಳಿದರು.

ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯೇದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ. ಶಂಕರನ್ ಮತ್ತು ಇಸ್ಟ್ರಾಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಪ್ರಧಾನಿಗೆ ಸ್ವಾಗತ ಕೋರಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...