ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿ ನಂತರ ಇದೀಗ ಹೆಚ್ ಎ ಎಲ್ ಏರ್ ಪೋರ್ಟ್ ನತ್ತ ನಿರ್ಗಮಿಸಿದ್ದಾರೆ.
ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿ ವಿಜ್ಞಾನಿಗಳನ್ನು ಕೊಂಡಾಡಿದರು.
* ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್
1) ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
2) ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ.ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಕರೆಯೋಣ, ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದರು.
3) ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಚಂದ್ರಯಾನ-3 ಯಶಸ್ಸಿಗೆ ಮಹಿಳಾ ವಿಜ್ಞಾನಿಗಳ ಕೊಡುಗೆಯೂ ಇದೆ ಎಂದು ಮಹಿಳಾ ವಿಜ್ಞಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ ಎಂದು ಮೋದಿ ಹೇಳಿದರು. ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ ಎಂದು ಮೋದಿ ಹೇಳಿದರು.
4) ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ಹೇಳುವ ವೇಳೆ ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಮಂತ್ರಿ ಮೋದಿ ಭಾವುಕರಾದರು. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್. ನಿಮ್ಮ ಧೈರ್ಯ, ಶಕ್ತಿ, ಶ್ರಮ, ಸಾಮರ್ಥ್ಯಕ್ಕೆ ನನ್ನ ನಮನಗಳು ಎಂದು ಮೋದಿ ಹೇಳಿದರು.
5) ಚಂದ್ರಯಾನ-3ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಅಸಾಧಾರಣ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಎದುರುನೋಡುತ್ತಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ಮೋದಿ ಹೇಳಿದರು.
6) ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಮಾತನಾಡಿದ ಪ್ರಧಾನಿ ಮೋದಿ ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂಬ ಘೋಷಣೆಯೊಂದಿಗೆ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದಾರೆ. ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು.
7) ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.
8) ನಿಮ್ಮನ್ನು ಭೇಟಿಯಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ಪೀಣ್ಯದ ಇಸ್ರೋ ಕಮಾಂಡ್ ಸೆಂಟರ್ನಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು.