ಬೆಂಗಳೂರು : ಸೆಪ್ಟೆಂಬರ್ 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ( Quiz competition) ಆಯೋಜನೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಿ ನಂತರ ಮಾತನಾಡಿದರು.
ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಅದೇ ರೀತಿ ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ಸೆಪ್ಟೆಂಬರ್ 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ಆಯೋಜನೆ ಮಾಡಲಾಗುತ್ತದೆ. ನಮ್ಮ ಮೇಕ್ ಇನ್ ಇಂಡಿಯಾ ಈಗ ಚಂದ್ರನತ್ತ ತಲುಪಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ.ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಕರೆಯೋಣ, ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದರು.ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ಹೇಳುವ ವೇಳೆ ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಮಂತ್ರಿ ಮೋದಿ ಭಾವುಕರಾದರು. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್. ನಿಮ್ಮ ಧೈರ್ಯ, ಶಕ್ತಿ, ಶ್ರಮ, ಸಾಮರ್ಥ್ಯಕ್ಕೆ ನನ್ನ ನಮನಗಳು ಎಂದು ಮೋದಿ ಹೇಳಿದರು.