ಮೈಸೂರು : ಪ್ರಧಾನಿ ಮೋದಿ ಬಳಿ ಎಲ್ಲರನ್ನೂ ಬಿಡಲು ಆಗಲ್ಲ, ಸೆಕ್ಯೂರಿಟಿ ಸಮಸ್ಯೆ ಇರುತ್ತದೆ ಎಂದು ಕಾಂಗ್ರೆಸ್ ಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಮೋದಿ ಭೇಟಿ ವೇಳೆ ಬಿಜೆಪಿ ನಾಯಕರೆಲ್ಲಾ ಬೀದಿಪಾಲಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ಬಳಿ ಎಲ್ಲರನ್ನೂ ಬಿಡಲು ಆಗಲ್ಲ, ಸೆಕ್ಯೂರಿಟಿ ಸಮಸ್ಯೆ ಇರುತ್ತೆ. ಜನ ಕಾಂಗ್ರೆಸ್ಗೆ 5 ವರ್ಷ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಬೆಳಗ್ಗೆ ಎದ್ದು ಮರ, ಗಿಡದ ಮೇಲೆ ಕುಳಿತು ಕಾ..ಕಾ ಅನ್ನೋದಕ್ಕೆ ಅಲ್ಲ. ಮೊದಲು ಕಾಂಗ್ರೆಸ್ನವರಿಗೆ ಕೆಲಸ ಮಾಡಲು ಹೇಳಿ ಎಂದು ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಟ್ವೀಟ್
ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ವೇಳೆ ರಾಜ್ಯದ ಬಿಜೆಪಿ ನಾಯಕರಿಗೆ ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ.
ಪ್ರಧಾನಿ ಮೋದಿ ಆಗಮನದ ವೇಳೆ ಬ್ಯಾರಿಕೇಡ್ ಹಿಂದೆ ಬಿಜೆಪಿ ನಾಯಕರು ನಿಂತಿದ್ದರು. ಈ ಫೋಟೋವನ್ನು ಕಾಂಗ್ರೆಸ್ ಟ್ವೀಟ್ ನಲ್ಲಿ ಹಂಚಿಕೊಂಡು ವ್ಯಂಗ್ಯವಾಡಿದೆ.