ಯಾದಗಿರಿ: ಕಳೆದ 15 ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಇಂದು ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ.
ಒಂದು ಗಂಟೆಗೂ ಅಧಿಕ ಕಾಲ ಯಾದಗಿರಿ ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗಿದೆ. ಮಳೆ ಇಲ್ಲದೆ ಬಿತ್ತಿದ, ನಾಟಿ ಮಾಡಿದ ಬೆಳೆಗಳು ಒಣಗಲಾರಂಬಿಸಿದ್ದವು. ಈಗ ಉತ್ತಮ ಮಳೆಯಾಗಿರುವುದು ರೈತರಲ್ಲಿ ಮಂದಹಾಸ ಮೂಡಿಸಿದೆ.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಮಧ್ಯಾಹ್ನದ ನಂತರ ಕೆಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ.