ಬೆಂಗಳೂರು : ಬಿಜೆಪಿ ಸರ್ಕಾದ ಅವಧಿಯ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿದೆ.
ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ ಅಪಾದನೆ ಕುರಿತಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ವರದಿ ಆಧಿರಿಸಿ ಈ ಆಯೋಗ ರಚಿಸಲಾಗಿದೆ.
ಕೋವಿಡ್ ನಿರ್ವಹಣೆ ಸಂಬಂಧ ಆರೋಗ್ಯ, ವೈದ್ಯಕೀಯ ಶಿಕ್ಷಣ ಮತ್ತಿತರ ಇಲಾಖೆಗಳ ಅಧೀನ ಸಂಸ್ಥೆಗಳಲ್ಲಿ ಔಷಧ, ಉಪಕರಣ, ಸಾಮಗ್ರಿ ಖರೀದಿಯಲ್ಲಿ ವ್ಯಾಪಕ ಅಕ್ರಮದ ಆರೋಪಗಳ ಕುರಿತು ನ್ಯಾ. ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗದ ತನಿಖೆ ನಡೆಸಲಿದೆ. ಜೊತೆಗೆ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆಯೂ ತನಿಖೆ ನಡೆಯಲಿದೆ.