ಶಿವಮೊಗ್ಗ: ಬುದ್ಧಿವಾದ ಹೇಳಿದ್ದಕ್ಕೆ 15 ಜನ ಯುವಕರ ತಂಡದಿಂದ ಮೂವರ ಮೇಲೆ ಮಾರಣಾಂತಿಕ ಹಲ್ಲೆ; ಸ್ಥಳದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ: ಮನೆಯ ಮುಂದೆ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ಗುಂಪಿಗೆ ಇಲ್ಲಿ ಗಲಾಟೆ ಮಾಡಬೇಡಿ ಎಂದು ಬುದ್ದಿವಾದ ಹೇಳಿದ್ದಕ್ಕೆ 15 ಜನ ಯುವಕರ ಗುಂಪು ಮೂವರ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಗೋಪಾಳಬಡಾವಣೆ ಕೊರಮರಕೇರಿ ಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ.

15 ಜನ ಯುವಕರ ಗುಂಫು ಯಾರನ್ನೋ ಹುಡುಕುತ್ತಾ ಗಲಾಟೆ ಮಾಡಲು ಶುರು ಮಾಡಿತ್ತು. ಈ ವೇಳೆ ತಿಮ್ಮಪ್ಪ ಎನ್ನುವವರು ಗಲಾಟೆ ಮಾಡಬೇಡಿ ಇಲ್ಲಿಂದ ಹೋಗಿ ಎಂದು ಯುವಕರಿಗೆ ಬುದ್ಧಿ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಅನ್ಯಕೋಮಿನ ಯುವಕರು ತಿಮ್ಮಪ್ಪ ಅವರನ್ನು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ದೊಣ್ಣೆಯಿಂದ ತಲೆಗೆ ಹೊಡೆದಿದ್ದಾರೆ. ಈ ವೇಳೆ ಬಿಡಿಸಲು ಬಂದ ತಿಮ್ಮಪ್ಪ ಅವರ ಮಗ ದರ್ಶನ್ ಹಾಗೂ ಮನು ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ.

ಡ್ರ್ಯಾಗರ್ ನಿಂದ ದರ್ಶನ್ ತೋಳಿನ ಭಾಗಕ್ಕೆ ಇರಿದಿದ್ದಾರೆ. ಮತ್ತೊಬ್ಬ ಯುವಕ ಮನು ಎಂಬಾತನ ಮೇಲೂ ಹಲ್ಲೆ ನಡೆಸಲಾಗಿದೆ. ಮೂವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ ಗುಂಪು ಅಲ್ಲಿಂದ ಪರಾರಿಯಾಗಿದೆ.

ಸ್ಥಳಕ್ಕೆ ತುಂಗಾನಗರ ಪೊಲೀಸರು ದೌಡಾಯಿಸಿ ದೂರು ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಹಲ್ಲೆ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read