ಪ್ರೀತಂ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹು ನಿರೀಕ್ಷಿತ ‘ಬಾನ ದಾರಿಯಲ್ಲಿ’ ಸಿನಿಮಾ ಸೆಪ್ಟೆಂಬರ್ 15ರಂದು ರಾಜ್ಯದ್ಯಂತ ತೆರೆ ಮೇಲೆ ಬರುತ್ತಿದ್ದು, ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದೆ.
ಇಂದು ಬಾನ ದಾರಿಯಲ್ಲಿ ಚಿತ್ರದ ಲಿರಿಕಲ್ ಹಾಡೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಅಶ್ವಿನಿ ಪುನೀತ್ ರಾಜಕುಮಾರ್ ಈ ಹಾಡನ್ನು ಲಾಂಚ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
ಮಾತೆಲ್ಲ ಹಾಗೆ ಇದೆ ಎಂಬ ಈ ಹಾಡಿಗೆ ಖ್ಯಾತ ಗಾಯಕ ಅರ್ಮಾನ್ ಮಲಿಕ್ ಧ್ವನಿಗೂಡಿಸಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಹಾಗೂ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.
ಶ್ರೀ ವಾರೆ ಟಾಕೀಸ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಗಣೇಶ್ ಕ್ರಿಕೆಟಿಗನಾಗಿ ಕಾಣಿಸಿಕೊಂಡಿದ್ದು, ರೀಷ್ಮಾ ನಾಣಯ್ಯ ಮತ್ತು ರುಕ್ಮಿಣಿ ವಸಂತ್ ನಾಯಕಿಯರಾಗಿ ಅಭಿನಯಿಸಿದ್ದಾರೆ.