ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 100 ದಿನ ಪೂರೈಸಿದೆ. ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುತ್ತೇವೆ. ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.