HomeKarnatakaBIG NEWS: ಸಾಲು ಸಾಲು ಬಿಜೆಪಿ ಶಾಸಕರಿಂದ ಸಿಎಂ ಡಿಸಿಎಂ ಭೇಟಿ; BJPಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು...

BIG NEWS: ಸಾಲು ಸಾಲು ಬಿಜೆಪಿ ಶಾಸಕರಿಂದ ಸಿಎಂ ಡಿಸಿಎಂ ಭೇಟಿ; BJPಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಖಚಿತ ಎಂದ ಸಚಿವ ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ: ಇತ್ತೀಚಿನ ಬೆಳವಣಿಗೆಯನ್ನು ನೋಡಿದರೆ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ ಎಂದು ಹೇಳಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯ ಹಲವು ಶಾಸಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸುತ್ತಿದ್ದಾರೆ. ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಬಿಜೆಪಿ ಮುಖಂಡರು ಡಿಸಿಎಂ ಬಳಿ ಬರುತ್ತಿರುವುದನ್ನು ನೋಡಿದರೆ ಅಸಮಾಧಾನ ಭುಗಿಲೆದ್ದಿರುವುದು ನಿಜ ಎಂದು ಗೊತ್ತಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಕೋವಿಡ್ ಸಂಕಷ್ಟದ ಸ್ಥಿತಿಯಲ್ಲಿ ಜನರು ರಸ್ತೆಯಲ್ಲಿ ಸಾಯುತ್ತಿದ್ದಾಗ ಬಿಜೆಪಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದರೆ ಅವರ ಮನಸ್ಥಿತಿ ಯಾವ ಮಟ್ಟದಲ್ಲಿತ್ತು ಎನ್ನುವುದನ್ನು ಊಹಿಸಿಕೊಳ್ಳಬೇಕು. ತನಿಖೆಯಾಗಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular