ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ.
ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. ಪುತ್ರಿಯನ್ನು ಕೊಲೆ ಮಾಡಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಂದೆ ವೆಂಕಟೇಶ ಗೌಡ ಮಗಳನ್ನು ಕೊಲೆ ಮಾಡಿ ಅಂತ್ಯಕ್ರಿಯೆ ನೆರವೇರಿಸಿದ್ದಾನೆ. ಈ ಬಗ್ಗೆ ಗ್ರಾಮದಲ್ಲಿ ಗುಸುಗುಸು ಕೇಳಿಬಂದು ಮಾಹಿತಿ ಪಡೆದ ಪೊಲೀಸರು ವೆಂಕಟೇಶ ಗೌಡನನ್ನು ವಿಚಾರಣೆಗೆ ಒಳಪಡಿಸಿದಾಗ ಅನ್ಯ ಜಾತಿ ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಲೆ ಮಾಡಿ ಅಂತ್ಯಸಂಸ್ಕಾರ ನೆರವೇರಿಸುವುದಾಗಿ ಹೇಳಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.