ಬೆಂಗಳೂರು : ರಾಜ್ಯದಲ್ಲಿ ಮಳೆಗಾಲದಲ್ಲೂ ತಾಪಮಾನ ಏರಿಕೆಯಾಗಿದ್ದು, ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಉಷ್ಣಾಂಶ ವಾಡಿಕೆಗಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಜೂನ್ ತಿಂಗಳಿನಿಂದ ಈವರೆಗೆ 666 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈವರೆಗೆ ಕೇವಲ 490 ಮಿ.ಮೀ ಮಳೆಯಾಗಿದೆ. ಆಗಸ್ಟ್ ತಿಂಗಳಿನಲ್ಲಿಯೇ ಶೇ. 23 ರಷ್ಟು ಮಳೆ ಕೊರತೆ ಉಂಟಾಗಿದೆ. ಹೀಗಾಗಿ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ.
ರಾಜ್ಯದಲ್ಲಿ ನೈಋತ್ಯ ದಿಕ್ಕಿನಿಂದ ಬೀಸುವ ಗಾಳಿ ಕಡಿಮೆಯಾಗಿ ವಾಯ್ಯುವ ದಿಕ್ಕಿನಿಂದ ಬಿಸಿಗಾಳಿ ಬೀಸುತ್ತಿದೆ. ಇದರಿಂದ ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.