HomeIndia450 ರೂ.ಗೆ LPG ಸಿಲಿಂಡರ್: ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ

450 ರೂ.ಗೆ LPG ಸಿಲಿಂಡರ್: ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ

ಭೋಪಾಲ್: ಈ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸಲು ಪೈಪೋಟಿ ನಡೆಸಿವೆ.

ಮಧ್ಯಪ್ರದೇಶ ಬಿಜೆಪಿ ಸರ್ಕಾರ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿದೆ. 450 ರೂ.ಗೆ ಎಲ್.ಪಿ.ಜಿ. ಸಿಲಿಂಡರ್, ಮಹಿಳೆಯರ ಮೀಸಲಾತಿಯನ್ನು ಶೇಕಡ 30 ರಿಂದ 35ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾಡ್ಲಿಬೆಹೆನಾ ಯೋಜನೆ ಅಡಿ ಈ ಹಿಂದೆ ಮಾಸಿಕ 1000 ರೂ. ನೀಡುತ್ತಿದ್ದು, ಇದನ್ನು 1250 ರೂ.ಗೆ ಹೆಚ್ಚಳ ಮಾಡಲಾಗುವುದು. ಶ್ರಾವಣ ಮಾಸದಲ್ಲಿ 450 ರೂ.ಗೆ ಸಿಲಿಂಡರ್ ನೀಡಲಿದ್ದು, ಇನ್ನು ಮುಂದೆ ಇದೇ ದರದಲ್ಲಿ ಮಹಿಳೆಯರಿಗೆ ಸಿಲಿಂಡರ್ ನೀಡಲು ಶಾಶ್ವತ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸರ್ಕಾರ ನೌಕರಿಯಲ್ಲಿ ಮಹಿಳೆಯರಿಗೆ ಶೇಕಡ 35 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular