ಹೈದರಾಬಾದ್: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ಸೂರ್ಯ ಯಾನಕ್ಕೆ ಸಜ್ಜಾಗಿದ್ದು, ಆದಿತ್ಯ ಎಲ್-1 ಉಡಾವಣೆಗೆ ದಿನಾಂಕ ಹಾಗೂ ಸಮಯ ನಿಗದಿ ಮಾಡಿದ್ದಾರೆ.
ಚಂದ್ರಯಾನ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ. ಇದೇ ಸಂದರ್ಭದಲ್ಲಿ ಇಸ್ರೋ ವಿಜ್ಞಾನಿಗಳು ಸೂರ್ಯ ಯಾನದ ಬಗ್ಗೆ ಘೋಷಣೆ ಮಾಡಿದ್ದು, ಸೂರ್ಯನಲ್ಲಿರುವ ಕೌತುಕ, ರಹಸ್ಯ ಭೇದಿಸಲು ಸಿದ್ಧತೆ ನಡೆಸಿದ್ದಾರೆ.
ಸೆಪ್ಟೆಂಬರ್ 2ರ ಬೆಳಿಗ್ಗೆ 11:50ಕ್ಕೆ ಆದಿತ್ಯ ಎಲ್ -1 ಮಿಷನ್ ಉಡಾವಣೆಯಾಗಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಉಡಾವಣೆಗೊಳ್ಳಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ.