HomeIndiaಪತ್ನಿಯ ಕಾಲ್ ರೆಕಾರ್ಡ್ ವಿವರ ಪಡೆದ ಪತಿ: ಅಕ್ರಮ ಸಂಬಂಧ ಶಂಕೆಯಿಂದ ಕತ್ತು ಸೀಳಿ ಕೊಲೆ

ಪತ್ನಿಯ ಕಾಲ್ ರೆಕಾರ್ಡ್ ವಿವರ ಪಡೆದ ಪತಿ: ಅಕ್ರಮ ಸಂಬಂಧ ಶಂಕೆಯಿಂದ ಕತ್ತು ಸೀಳಿ ಕೊಲೆ

ಮುಂಬೈ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯ ಕತ್ತು ಸೀಳಿ ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರ ಪ್ರದೇಶದ ಅವರ ಮನೆಯಲ್ಲಿ ಪತ್ನಿ ಪ್ರನಾಳಿಯನ್ನು ಕೊಂದ ಆರೋಪದ ಮೇಲೆ ಲಲಿತ್ ರಾಮದಾಸ್ ದಹತ್(38) ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆ ಬೆಳಿಗ್ಗೆ 8.30 ರ ಸುಮಾರಿಗೆ ತನ್ನ ಪೋಷಕರನ್ನು ಭೇಟಿ ಮಾಡಿದ ನಂತರ ಮನೆಗೆ ಮರಳಿದ್ದಳು, ಈ ವೇಳೆ ದಂಪತಿಗಳ ನಡುವೆ ಜಗಳ ನಡೆದಿದೆ. ಕೋಪದ ಭರದಲ್ಲಿ ಆರೋಪಿ ತನ್ನ ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕತ್ತು ಸೀಳಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ನಂತರ ದಹತ್ ಮನೆಯಿಂದ ಹೊರಬಂದು ಪೊಲೀಸ್ ಪಡೆಯಲ್ಲಿರುವ ಸಂಬಂಧಿಕರು ಮತ್ತು ಸ್ನೇಹಿತನನ್ನು ಸಂಪರ್ಕಿಸಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದಾನೆ.

ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಆರೋಪಿ ಆರು ವರ್ಷಗಳ ಹಿಂದೆ ಸಂತ್ರಸ್ತೆಯನ್ನು ಮದುವೆಯಾಗಿದ್ದ. ಆಕೆಗೆ ಸಂಬಂಧವಿದೆ ಎಂದು ಶಂಕಿಸಿದ್ದು, ಕೊಲೆಗೂ ಮುನ್ನ ಆಕೆಯ ಫೋನ್‌ನಿಂದ ಕಾಲ್ ರೆಕಾರ್ಡ್ ವಿವರಗಳನ್ನು ಪಡೆದುಕೊಂಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular