ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
230 ವಾಣಿಜ್ಯ ತೆರಿಗೆ ಪರಿವೀಕ್ಷಕರು (ಸಿಟಿಐ) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 4ರಂದು ಕನ್ನಡ ಪರೀಕ್ಷೆ ಹಾಗೂ ನವೆಂಬರ್ 5 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೆ.ಪಿ.ಎಸ್.ಸಿ. ತಿಳಿಸಿದೆ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂಪಾಯಿಗಳಾಗಿದ್ದು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದ್ದು, ಪ್ರವರ್ಗ 1, ಎಸ್ಸಿ/ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ.