HomeKarnatakaಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.1 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ | JOB FAIR

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.1 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ | JOB FAIR

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆಪ್ಟೆಂಬರ್ 01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಸಂದರ್ಶನದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular