alex Certify BREAKING : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ : ಸ್ವಾಗತ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ : ಸ್ವಾಗತ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಮೈಸೂರಿನಲ್ಲಿ ಇಂದು ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತ ಕೋರಿದ್ದಾರೆ. ನಂತರ ಅಲ್ಲಿಂದ ನೇರವಾಗಿ ರಾಹುಲ್ ಗಾಂಧಿ ಮೈಸೂರಿಗೆ ತೆರಳಲಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11.30 ಕ್ಕೆ ಗೃಹಲಕ್ಷ್ಮಿ’ ಯೋಜನೆ  ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...