‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ನೋಡಲು ಬಂದಿದ್ದ ಮಹಿಳೆ ತಲೆ ಮೇಲೆ ಹಲಸಿನ ಕಾಯಿ ಬಿದ್ದ ಘಟನೆ ಅನೇಕಲ್ ನಲ್ಲಿ ನಡೆದಿದೆ.
ಮಂಟಪ ಗ್ರಾಮ ಪಂಚಾಯಿತಿ ಕಚೇರಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ವೇಳೆ ಮಹಿಳೆ ತಲೆಯ ಮೇಲೆ ಹಲಸಿನ ಕಾಯಿ ಬಿದ್ದಿದ್ದು, ಮಹಿಳೆ ತಲೆಗೆ ಗಾಯಗಳಾಗಿದೆ. ಕೂಡಲೇ ಆರೋಗ್ಯ ಕೇಂದ್ರದ ಸಿಬ್ಬಂದಿ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಇಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದ ಸುತ್ತ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.