BREAKING : ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯ ಸ್ಥಿರ : ‘ಅಪೋಲೋ’ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಬೆಂಗಳೂರು : ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ.

ಆಸ್ಪತ್ರೆಗೆ ದಾಖಲಾದ ಕೂಡಲೇ ಅವರಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಇಂದು ಬೆಳಗಿನ ಜಾವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ರಕ್ಷಾ ಬಂಧನದ ಶುಭಾಶಯ ಕೋರಿದ ಹೆಚ್ಡಿಕೆ

ನಾಡಿನ ಎಲ್ಲಾ ಸಹೋದರಿಯರು ಮತ್ತು ಸಹೋದರರಿಗೆ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಸಾಮರಸ್ಯ, ಸಹೋದರತ್ವ, ಭ್ರಾತೃತ್ವ ಹಾಗೂ ಅಭಯದ ಪ್ರತೀಕವಾದ ರಕ್ಷಾಬಂಧನ ಆಚರಣೆ ಎಲ್ಲರಿಗೂ ಶುಭವನ್ನು ಉಂಟು ಮಾಡಲಿ ಎಂದು ಶುಭಾಶಯ ಕೋರಿದ್ದಾರೆ.

https://twitter.com/hd_kumaraswamy/status/1696724842379354337?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read