HomeKarnatakaಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ನಿಮ್ಮ ಖಾತೆಗೆ ಬಂತಾ..? ಚೆಕ್ ಮಾಡಲು ಜಸ್ಟ್ ಹೀಗೆ...

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ನಿಮ್ಮ ಖಾತೆಗೆ ಬಂತಾ..? ಚೆಕ್ ಮಾಡಲು ಜಸ್ಟ್ ಹೀಗೆ ಮಾಡಿ

ಮೈಸೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದಲೇ ಪ್ರತಿ ತಿಂಗಳು 2000 ಹಣ ಮನೆ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಲಿದೆ.ಕೆಲವು ಮಹಿಳೆಯರ ಖಾತೆಗೆ 2000 ರೂ ಹಣ ಬಂದಿರುವ ಮೆಸೇಜ್ ಬಂದಿದೆ ಎನ್ನಲಾಗಿದ್ದು, ಮಹಿಳೆಯರು ಖುಷಿಯಾಗಿದ್ದಾರೆ. ನಿಮ್ಮ ಖಾತೆಗೂ ಹಣ ಬಂದಿದೆಯಾ.. ಒಟ್ಟಿಗೆ ಕೋಟ್ಯಾಂತರ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗುತ್ತಿರುವ ಕಾರಣ ನಿಮ್ಮ ಖಾತೆಗೆ ಹಣ ಬರುವುದಕ್ಕೆ ಒಂದೆರಡು ದಿನಗಳ ಸಮಯ ತೆಗೆದುಕೊಳ್ಳಬಹುದು.

1) ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೀವು ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡುವ DBT ಸ್ಟೇಟಸ್ ವಿಧಾನದಿಂದ ಕೂಡ ನೀವು ನಿಮ್ಮ ಯಾವ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಯಾವ ದಿನಾಂಕದಂದು ವರ್ಗಾವಣೆ ಆಗಿದೆ ಎನ್ನುವುದರ ಮಾಹಿತಿಯನ್ನು ಪಡೆದು ಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2) ನೀವು ಗೃಹಲಕ್ಷ್ಮಿ ಯೋಜನೆಯ 2000 ಹಣ ಪಡೆದ ತಕ್ಷಣವೇ ನಿಮ್ಮ ಬ್ಯಾಂಕ್ ಖಾತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ SMS ಕೂಡ ಬರುತ್ತದೆ.

3) ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಖಾತೆಯ ಮಾಹಿತಿಯನ್ನು ತಿಳಿದುಕೊಳ್ಳುವ ಮೂಲಕ ಗೃಹಲಕ್ಷ್ಮಿ ಯೋಜನೆ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ದೃಢಪಡಿಸಿಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ನೀವು ಈ ರೀತಿಯಾಗಿ ಚೆಕ್ ಮಾಡಬಹುದು.

ಮೊದಲು https://ahara.kar.nic.in/Home/EServices ವೆಬ್ ಸೈಟ್ ಭೇಟಿ ಕೊಡಿ. ನಂತರ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿ..ಬಳಿಕ ಇನ್ನೊಂದು ಪೇಜ್ ಓಪನ್ ಆಗುತ್ತದೆ..ಅಲ್ಲಿ ನಿಮ್ಮ ಆರ್ ಸಿ ನಂಬರ್, ವಿಳಾಸ, ರೇಷನ್ ಕಾರ್ಡ್ ಬಗ್ಗೆ ಮಾಹಿತಿ ಬರುತ್ತದೆ. ಆರ್ ಸಿ ನಂಬರ್ ಬಳಿಕ ಮಹಿಳೆಯರ ಹೆಸರಿದ್ದರೆ ಮಾತ್ರ ಅವರನ್ನು ಕುಟುಂಬದ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತದೆ. ಇಲ್ಲಿ ಮಹಿಳೆಯರ ಹೆಸರಿದ್ದವರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿದ್ದರೆ 2 ಸಾವಿರ ಜಮಾ ಮಾಡಲಾಗುತ್ತದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular