HomeEntertainmentಸೆಪ್ಟೆಂಬರ್ 2 ಕ್ಕೆ 'ವಾಮನ' ಚಿತ್ರದ ಮತ್ತೊಂದು ಹಾಡು ರಿಲೀಸ್

ಸೆಪ್ಟೆಂಬರ್ 2 ಕ್ಕೆ ‘ವಾಮನ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ಧನ್ವೀರ್ ಗೌಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬಹು ನಿರೀಕ್ಷಿತ ‘ವಾಮನ’ ಸಿನಿಮಾ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದೆ. ‌

ಈಗಾಗಲೇ ಹಾಡುಗಳ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಮತ್ತೊಂದು ಹಾಡು ಸೆಪ್ಟೆಂಬರ್ 2 ಕ್ಕೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ  ರಿಲೀಸ್ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಂಕರ್ ರಾಮನ್ ನಿರ್ದೇಶನದ ಈ ಚಿತ್ರದಲ್ಲಿ ಧನ್ವೀರ್ ಗೌಡ ಹಾಗೂ ರೀಷ್ಮಾ ನಾಣಯ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಚೇತನ್ ಗೌಡ ನಿರ್ಮಾಣ ಮಾಡಿದ್ದಾರೆ. ಆದಿತ್ಯ ಮೆನನ್ ಸೇರಿದಂತೆ ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಸಂಪತ್ ರಾಜ್ ತೆರೆ ಹಂಚಿಕೊಂಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular