
ಕೋಲಾರ : ಅನಾರೋಗ್ಯದಿಂದ ಬೇಸತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘೋರ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಣಸನಹಳ್ಳಿ ಬಳಿ ನಡೆದಿದೆ.
56 ವರ್ಷದ ಮುನಿರಾಜು ಮೃತ ವ್ಯಕ್ತಿ. ಮುನಿರಾಜು ಕಳೆದೆ ಹಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಡಯಾಲಿಸೀಸ್ ನಲ್ಲಿದ್ದರು. ಇತ್ತೀಚೆಗೆ ತೀವ್ರ ಅನಾರೋಗ್ಯ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ನೊಂದ ಮುನಿರಾಜು ದುಡುಕಿನ ನಿರ್ಧಾರ ಮಾಡಿದ್ದಾರೆ.
ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುನಿರಾಜು ದೇಹ ಛಿದ್ರಛಿದ್ರವಾಗಿದೆ. ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.