HomeKarnatakaBIG NEWS: ಕೆಲವೇ ಕ್ಷಣಗಳಲ್ಲಿ ಶಿವಮೊಗ್ಗಕ್ಕೆ ಮೊದಲ ವಿಮಾನ ಹಾರಾಟ; ಮೊದಲ ಪ್ರಯಾಣ ಮಾಡಲಿರುವ ಬಿಎಸ್...

BIG NEWS: ಕೆಲವೇ ಕ್ಷಣಗಳಲ್ಲಿ ಶಿವಮೊಗ್ಗಕ್ಕೆ ಮೊದಲ ವಿಮಾನ ಹಾರಾಟ; ಮೊದಲ ಪ್ರಯಾಣ ಮಾಡಲಿರುವ ಬಿಎಸ್ ವೈ-ಎಂ.ಬಿ.ಪಾಟೀಲ್

ಬೆಂಗಳೂರು: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇಂದಿನಿಂದ ಬೆಂಗಳೂರು- ಶಿವಮೊಗ್ಗ ನಡುವೆ ಲೋಹದ ಹಕ್ಕಿಗಳ ಹಾರಾಟ ಆರಂಭವಾಗಲಿದೆ.

ಕೆಲವೇ ಹೊತ್ತಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಹಾರಾಟ ನಡೆಸಲಿದೆ. ಮೊದಲ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಶಾಸಕ ಅರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಪ್ರಯಾಣಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಬೆಂಗಳೂರು-ಶಿವಮೊಗ್ಗ ನಡುವೆ ಇಂದಿನಿಂದ ವಿಮಾನ ಹಾರಾಟ ಆರಂಭವಾಗಲಿದ್ದು, ಮಲೆನಾಡಿನ ಜನರ ಹಲವು ವರ್ಷಗಳ ಕನಸು ನನಸಾದಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular