ಕಲಬುರಗಿ : ಕಲಬುರಗಿ ಪಾಲಿಕೆ ಕಚೇರಿಗೆ ನುಗ್ಗಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಲಬುರಗಿ ಮಹಾನಗರ ಪಾಲಿಕೆ ಕಚೇರಿಗೆ ನುಗ್ಗಿ ಹೆಲ್ತ್ ಇನ್ಸ್ಪೆಕ್ಟರ್ ಧನಶೆಟ್ಟಿ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಟ್ರೇಡ್ ಲೈಸೆನ್ಸ್ ವಿಚಾರವಾಗಿ ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಪ್ರಿಯಾಂಕ್ ಖರ್ಗೆ ಬೆಂಬಲಿಗ ಅವಿನಾಶ್ ಭಾಸ್ಕರ್ ಪಾಲಿಕೆ ಉಪ ಆಯುಕ್ತರ ಮುಂದೆಯೇ ಹೆಲ್ತ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.