‘ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು’ : ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ.

ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ ಆದರೂ ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ ಎಂದಿದ್ದಾರೆ.

ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

 

https://twitter.com/BSBommai/status/1697145835321205229

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read