ನೀವು ಇನ್ನೂ ನಿಮ್ಮ ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡದಿದ್ದರೆ ಇಲ್ಲಿ ಗಮನಿಸಿ. ಪಡಿತರ ಚೀಟಿಯನ್ನು ಆಧಾರ್ ಜೊತೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು 30 ಸೆಪ್ಟೆಂಬರ್ 2023 ರವರೆಗೆ ವಿಸ್ತರಿಸಲಾಗಿದ್ದು, ಈ ದಿನಾಂಕದೊಳಗೆ ನೀವು ಲಿಂಕ್ ಮಾಡಬೇಕು ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಈ ಮಾಹಿತಿಯನ್ನು ನೀಡಿದೆ.
ಸರ್ಕಾರವು “ಒನ್ ನೇಷನ್ ಒನ್ ರೇಷನ್ ಕಾರ್ಡ್” ನೀತಿಯನ್ನು ತಂದಾಗಿನಿಂದ, ಪಡಿತರ ಚೀಟಿಗಳನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ಒತ್ತು ನೀಡಲಾಗುತ್ತಿದೆ. ಪಡಿತರ ಚೀಟಿಯಲ್ಲಿ ತೊಂದರೆಗಳನ್ನು ತಡೆಗಟ್ಟುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳುವ ಮತ್ತು ವಿವಿಧ ಸ್ಥಳಗಳಲ್ಲಿ 2-3 ಪಡಿತರ ಚೀಟಿಗಳನ್ನು ಪಡೆಯುವ ಅನೇಕ ಜನರಿದ್ದಾರೆ.
ಸೆಪ್ಟೆಂಬರ್ 30 ರ ಕೊನೆಯ ದಿನಾಂಕದ ನಂತರ ತಮ್ಮ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಲು ಯಾರಿಗೂ ಅನುಮತಿಸಲಾಗುವುದಿಲ್ಲ. ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರು ಹಂತಗಳನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಮೂಲಗಳು ಸೂಚನೆ ನೀಡಿದೆ.ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು, ಅಲ್ಲದೇ ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು.
ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಹೇಗೆ..?
ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಆನ್ಲೈನ್ನಲ್ಲಿ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
• ನಿಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಹೋಗಿ.
• ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
• ‘ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರುತ್ತದೆ.
• ಒಟಿಪಿ ನಮೂದಿಸಿ ಮತ್ತು ಪಡಿತರ ಚೀಟಿ ಆಧಾರ್ ಕಾರ್ಡ್ ಲಿಂಕ್ ಕ್ಲಿಕ್ ಮಾಡಿ