ಬೆಂಗಳೂರು : ಕಾವೇರಿ ನದಿ ನೀರು ವಿವಾದ ಸೇರಿದಂತೆ ಹಲವು ರೈತ ವಿರೋಧಿ ನೀತಿ ವಿರೋಧಿಸಿ ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರಕ್ಕೆ ರೈತರ ಮೇಲೆ ಯಾಕಿಷ್ಟು ದ್ವೇಷ ಗೊತ್ತಿಲ್ಲ..! ದ್ವೇಷ ಮಾಡಲು ರಾಜ್ಯದ ಜನರು ನಿಮಗೆ ಅಧಿಕಾರ ಕೊಟ್ಟಿರುವುದಲ್ಲ. ಸರ್ಕಾರ ರೈತರಿಗೆ ಏನು ಮಾಡುತ್ತಿದೆ. ರೈತ ಸಂಬಂಧಿಸಿದ ಯೋಜನೆಗಳನ್ನು ತಡೆಹಿಡಿಯಲಾಗಿದೆ. ರೈತ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಸೆ.8 ರಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತದೆ. ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.