HomeIndiaBREAKING NEWS: ‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೆ ಮಹತ್ವದ ಕ್ರಮ: ಒಟ್ಟಿಗೆ ಎಂಪಿ, ಎಂಎಲ್ಎ...

BREAKING NEWS: ‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೆ ಮಹತ್ವದ ಕ್ರಮ: ಒಟ್ಟಿಗೆ ಎಂಪಿ, ಎಂಎಲ್ಎ ಎಲೆಕ್ಷನ್ ನಡೆಸಲು ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂದು ಹೇಳಲಾಗಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯುವ ಸಂಸತ್ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಪರಿಚಯಿಸಬಹುದು ಎಂದು ಮೂಲಗಳು ಗುರುವಾರ ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಎನ್ನುವುದು ಲೋಕಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳ ಅಸೆಂಬ್ಲಿಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಕಲ್ಪನೆಯನ್ನು ಸೂಚಿಸುತ್ತದೆ. ಈ ಕಲ್ಪನೆಯನ್ನು ಈ ಹಿಂದೆ ಹಲವಾರು ಬಾರಿ ಪ್ರಸ್ತಾಪಿಸಲಾಗಿದೆ ಮತ್ತು ಭಾರತದ ಕಾನೂನು ಆಯೋಗವು ಅಧ್ಯಯನ ಮಾಡಿದೆ.

ಪ್ರಸ್ತುತ ಲೋಕಸಭೆ ಅಥವಾ ರಾಜ್ಯ ಅಸೆಂಬ್ಲಿ ಚುನಾವಣೆಗಳು ಅವುಗಳ ಅವಧಿಯ ಕೊನೆಯಲ್ಲಿ ನಡೆಯುತ್ತದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯ ಅಡಿಯಲ್ಲಿ, ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಒಂದೇ ಅವಧಿಯಲ್ಲಿ ಚುನಾವಣೆಗಳು ನಡೆಯಲಿದ್ದು, ಬಹುಶಃ ಒಂದೇ ದಿನದಲ್ಲಿ ಮತದಾನ ನಡೆಯಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular