ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದ್ದು, ಈ ಬಗ್ಗೆ ಅವಲೋಕಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.
ಹೌದು. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂದು ಹೇಳಲಾಗಿದೆ. ಈ ಹಿನ್ನೆಲೆ ಬಗ್ಗೆ ಅವಲೋಕಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.
ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯುವ ಸಂಸತ್ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಪರಿಚಯಿಸಬಹುದು ಎಂದು ಮೂಲಗಳು ಗುರುವಾರ ತಿಳಿಸಿವೆ.ಒಂದು ರಾಷ್ಟ್ರ, ಒಂದು ಚುನಾವಣೆ’ ಎನ್ನುವುದು ಲೋಕಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳ ಅಸೆಂಬ್ಲಿಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಕಲ್ಪನೆಯನ್ನು ಸೂಚಿಸುತ್ತದೆ. ಈ ಕಲ್ಪನೆಯನ್ನು ಈ ಹಿಂದೆ ಹಲವಾರು ಬಾರಿ ಪ್ರಸ್ತಾಪಿಸಲಾಗಿದೆ ಮತ್ತು ಭಾರತದ ಕಾನೂನು ಆಯೋಗವು ಅಧ್ಯಯನ ಮಾಡಿದೆ.
ಪ್ರಸ್ತುತ ಲೋಕಸಭೆ ಅಥವಾ ರಾಜ್ಯ ಅಸೆಂಬ್ಲಿ ಚುನಾವಣೆಗಳು ಅವುಗಳ ಅವಧಿಯ ಕೊನೆಯಲ್ಲಿ ನಡೆಯುತ್ತದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯ ಅಡಿಯಲ್ಲಿ, ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಒಂದೇ ಅವಧಿಯಲ್ಲಿ ಚುನಾವಣೆಗಳು ನಡೆಯಲಿದ್ದು, ಬಹುಶಃ ಒಂದೇ ದಿನದಲ್ಲಿ ಮತದಾನ ನಡೆಯಲಿದೆ ಎನ್ನಲಾಗಿದೆ.