HomeKarnatakaBIG NEWS: ಕಾವೇರಿ ಹೋರಾಟಕ್ಕೆ ಆಸ್ಪತ್ರೆಯಿಂದಲೇ ಕರೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ; ನಾಳೆಯಿಂದಲೇ ಚಳುವಳಿ...

BIG NEWS: ಕಾವೇರಿ ಹೋರಾಟಕ್ಕೆ ಆಸ್ಪತ್ರೆಯಿಂದಲೇ ಕರೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ; ನಾಳೆಯಿಂದಲೇ ಚಳುವಳಿ ಆರಂಭ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ಆಸ್ಪತ್ರೆಯಿಂದಲೇ ಕಾವೇರಿ ಹೋರಾಟಕ್ಕೆ ಕರೆ ನೀಡಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ನಾಳೆ ಸಂಜೆ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈ ನಡುವೆ ಮಾಜಿ ಶಾಸಕ ಅನ್ನದಾನಿ ಜೊತೆ ಮಾತನಾಡಿರುವ ಕುಮಾರಸ್ವಾಮಿ ಕಾವೇರಿ ನೀರು ಉಳಿವಿಗಾಗಿ ಹೋರಾಟ ಅರಂಭಿಸುವಂತೆ ಕರೆ ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಅನ್ನದಾನಿ ಸುದ್ದಿಗರರೊಂದಿಗೆ ಮಾತನಾಡುತ್ತಾ ಈ ಬಗ್ಗೆ ತಿಳಿಸಿದ್ದು, ಕುಮಾರಸ್ವಾಮಿ ಅರ್ಧಗಂಟೆಗೂ ಹೆಚ್ಚು ಕಾಲ ನನ್ನ ಜೊತೆ ಮಾತನಾಡಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಕರೆ ಕೊಟ್ಟಿದ್ದಾರೆ. ನಾಳೆ ರಾಷ್ಟ್ರಾಧ್ಯಕ್ಷ ದೇವೇಗೌಡರ ನೇತೃತ್ವದಲ್ಲಿ ಚಳುವಳಿ ಆರಂಭವಾಗಲಿದೆ ಎಂದಿದ್ದಾರೆ. ಕಾವೇರಿ ನೀರಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಇದ್ದು, ಮುಂದಿನ ದಿನಗಳಲ್ಲಿ ಮಂಡ್ಯ, ಬೆಂಗಳೂರಿಗೂ ನೀರಿನ ಸಮಸ್ಯೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಚಳುವಳಿ ಆರಂಭಿಸುತ್ತೇವೆ ಎಂದಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular