HomeKarnatakaBIG NEWS: 40 ಅಲ್ಲ, 136 ಶಾಸಕರನ್ನು ಸಂಪರ್ಕದಲ್ಲಿಟ್ಟುಕೊಳ್ಳಲಿ; ಬಿ.ಎಲ್.ಸಂತೋಷ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

BIG NEWS: 40 ಅಲ್ಲ, 136 ಶಾಸಕರನ್ನು ಸಂಪರ್ಕದಲ್ಲಿಟ್ಟುಕೊಳ್ಳಲಿ; ಬಿ.ಎಲ್.ಸಂತೋಷ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನ ‘ಆಪರೇಷನ್ ಹಸ್ತ’ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಬಿ.ಎಲ್.ಸಂತೋಷ್ ಹೇಳಿಕೆಗೆ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕಾಂಗ್ರೆಸ್ ನ 40 ಅಲ್ಲ, 136 ಶಾಸಕರನ್ನೂ ಅವರು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಹಳ ಸಂತೋಷ. ನಮ್ಮ ಎಲ್ಲಾ ಶಾಸಕರನ್ನು ಸಂಪರ್ಕದಲ್ಲಿಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸಭೆಯಲ್ಲಿ ಕೆಲ ನಾಯಕರು ’ಆಪರೇಷನ್ ಹಸ್ತ’ದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ವೇಳೆ ಬಿ.ಎಲ್.ಸಂತೋಷ್, ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ವರಿಷ್ಠರು ಒಪ್ಪಿದರೆ ಒಂದು ದಿನದ ಕೆಲಸ. ಆದರೆ ಈಗ ನಮಗೆ ಅದರ ಅಗತ್ಯವಿಲ್ಲ ಎಂದು ಹೇಳಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular