HomeKarnatakaತುಂಬಿದ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ತುಂಬಿದ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದು, ತುಂಬಿದ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ಏರ್ ಸ್ಟ್ರಿಪ್ ಗೆ ಆಗಮಿಸಲಿರುವ ಸಿಎಂ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಹೊರಟು 11:45ಕ್ಕೆ ಆಲಮಟ್ಟಿಗೆ ಆಗಮಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಲಮಟ್ಟಿ ಜಲಾಶಯಕ್ಕೆ ಆಗಮಿಸಲಿರುವ ಅವರು ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ, ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಕುರಿತು ಸಭೆ ನಡೆಸಲಿದ್ದಾರೆ. ಸಚಿವ ಎಂ.ಬಿ. ಪಾಟೀಲ ಸೇರಿ ಹಲವರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಆಲಮಟ್ಟಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular