ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದ್ದು, ಇಂದು ಇಲ್ಲವೇ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದು, ಚೇತರಿಸಿಕೊಂಡಿರುವ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ತಪಾಸಣೆ ನಡೆಸಿದ ನಂತರ ಡಿಸ್ಚಾರ್ಜ್ ಮಾಡುವ ಬಗ್ಗೆ ವೈದ್ಯರು ತೀರ್ಮಾನ ಕೈಗೊಳ್ಳಲಿದ್ದಾರೆ. ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿಯವರಿಗೆ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿ ನಂತರ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದಾರೆ.