HomeIndiaಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ

ಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ

ಜೈಪುರ: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯ ಹಳ್ಳಿಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದಾನೆ.

ಮಹಿಳೆ ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಧರಿಯಾವಾಡದ ಎಸ್‌ಎಚ್‌ಒ ಪೇಶಾವರ್ ಖಾನ್ ಅವರು ಮಾಹಿತಿ ನೀಡಿದ್ದು, ಗುರುವಾರ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಉಮೇಶ್ ಮಿಶ್ರಾ ಮಾತನಾಡಿ, ಮಹಿಳೆಯ ಸಂಬಂಧಿಕರು ಆಕೆಯನ್ನು ಅಪಹರಿಸಿ ಘಟನೆ ನಡೆದ ತಮ್ಮ ಗ್ರಾಮಕ್ಕೆ ಕರೆದೊಯ್ದಿದ್ದಾರೆ. ಆಕೆ ಬೇರೊಬ್ಬ ಪುರುಷನೊಂದಿಗೆ ವಾಸಿಸುತ್ತಿದ್ದರಿಂದ ಆಕೆಯ ಅತ್ತೆಯಂದಿರು ಸಿಟ್ಟಾಗಿದ್ದರು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿರ್ದೇಶನದ ಮೇರೆಗೆ ಡಿಜಿಪಿ ಮಿಶ್ರಾ ಅವರು ಶುಕ್ರವಾರ ರಾತ್ರಿ ಎಡಿಜಿ(ಅಪರಾಧ) ದಿನೇಶ್ ಎಂಎನ್ ಅವರನ್ನು ಪ್ರತಾಪಗಢಕ್ಕೆ ಕಳುಹಿಸಿದ್ದಾರೆ. ಜಿಲ್ಲೆಯ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಜನರ ಸಮ್ಮುಖದಲ್ಲಿಯೇ ವಿವಸ್ತ್ರಗೊಳಿಸಿ ಆಕೆಯನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ರಾಜ್ಯ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎಡಿಜಿ ದಿನೇಶ್ ಅವರನ್ನು ಪ್ರತಾಪಗಢಕ್ಕೆ ಕಳುಹಿಸಲಾಗಿದೆ ಎಂದು ಜೈಪುರದಲ್ಲಿ ಡಿಜಿಪಿ ಮಿಶ್ರಾ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದ್ದು, ಪ್ರತಾಪಗಢ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular