ಬೆಂಗಳೂರು : ಇಂದು ಸಂಜೆ ಬೆಂಗಳೂರು ನಗರದ ಹಲವು ಕಡೆ ಭಾರಿ ‘ಮಳೆ’ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದ್ದು, ಅದು ಸಂಜೆ ವೇಳೆ ಮಾತ್ರ ಮಳೆ ಅಬ್ಬರ ಜೋರಾಗಿರಲಿದೆ ಎಂದು ಮುನ್ಸೂಚನೆ ನೀಡಿದೆ. ಆದ್ದರಿಂದ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವವರು, ವಾಹನ ಸವಾರರು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇಂದು ಸಂಜೆ ಕೂಡ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ .
ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.