ದೇವನಹಳ್ಳಿ : ಸಕ್ಕರೆ ಎಂದು ಡ್ರೈನೇಜ್ ಕ್ಲೀನರ್ ಸೇವಿಸಿ 3 ಮಕ್ಕಳು ಅಸ್ವಸ್ಥರಾದ ಘಟನೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಆಟವಾಡುತ್ತಿದ್ದ ಮಕ್ಕಳು ಬಿಳಿ ಸಕ್ಕರೆಯಂತಿದ್ದ ಡ್ರೈನೇಜ್ ಕ್ಲೀನರ್ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇದನ್ನು ನೋಡಿದ ಅಕ್ಕಪಕ್ಕದ ಮನೆಯವರು ಪೋಷಕರಿಗೆ ಸುದ್ದಿ ಮುಟ್ಟಿಸಿ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಸುಚಿತ್ರಾ (3) ಲೋಹಿತ್ಯಾ (4) ವೇದಾಂತ (3) ಎಂಬ ಮಕ್ಕಳು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.