BREAKING : 2023-24 ನೇ ಸಾಲಿನ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕರ ಪ್ರಶಸ್ತಿ’ ಪ್ರಕಟ : ಹೀಗಿದೆ ಪಟ್ಟಿ

ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟವಾಗಿದ್ದು, ಸೆ.5 ರಂದು ಶಿಕ್ಷಕರಿಗೆ ಪ್ರಶಸ್ತಿಪ್ರದಾನ  ಮಾಡಲಾಗುತ್ತದೆ.

ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು  ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ.  ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ಮುಂದುವರೆದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ದಿನಾಂಕ: 15.09.2023 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಸಹ ಶಿಕ್ಷಕರು/ವಿಶೇಷ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read