HomeIndiaನೇತ್ರ‍ಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ನೇತ್ರ‍ಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಕಾಸರಗೋಡು: ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.

ದುಷ್ಕರ್ಮಿಗಳು ಎಕ್ಸ್ ಪ್ರೆಸ್ ರೈಲಿನ ಎಸ್ 2 ಕೋಚ್ ಗೆ ಕಲ್ಲು ತೂರಿದ್ದಾರೆ. ಪರಿಣಾಮ ರೈಲಿನ ಬಾಗಿಲಿನ ಗಾಜು ಪುಡಿ ಪುಡಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಂಬ್ಳೆ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಕೇರಳದ ಕೆಲವೆಡೆಗಳಲ್ಲಿ ಇತ್ತೀಚೆಗೆ ರೈಲುಗಳ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚುತ್ತಿದ್ದು, ಇಂತಹ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸುತ್ತಿರುವಗಲೇ ಕಾಸರಗೋಡಿನಲ್ಲಿ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲುತೂರಾಟ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular