ಶಿವಮೊಗ್ಗ: ಇಬ್ಬರು ಮಕ್ಕಳು ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ.
6 ವರ್ಷದ ಬಾಲಕಿ ಬೇಬಿ ಹುಚ್ಚು ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ನಂಜುಂಡಪ್ಪ ಹಾಗೂ ಮಣಿ ದಂಪತಿಯ ಪುತ್ರಿ 6 ವರ್ಷದ ಬೇಬಿ ಶಾಲೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಗುತ್ತಿದೆ. ಉಳಿದ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ ನಡೆಸುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.