alex Certify ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಅನಾರೋಗ್ಯ, ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಬೆಳಗ್ಗೆ ಅಥವಾ ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿಗೆ ICU ನಲ್ಲಿ ನೀಡಿ ನಂತರ ವೈದ್ಯರು ವಾರ್ಡ್ ಗೆ ಶಿಫ್ಟ್ ಮಾಡಿದ್ದರು. ಇಂದು ಹೆಚ್ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಮನೆಗೆ ಹೋದ ಬಳಿಕ ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಪ್ರವಾಸ ಮಾಡಬಾರದು , ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...