HomeKarnatakaಕೂಲಿ ಕಾರ್ಮಿಕರು ಸೇರಿ ಜನತೆಗೆ ಗುಡ್ ನ್ಯೂಸ್: ರಾತ್ರಿ 8ರವರೆಗೆ ನಮ್ಮ ಕ್ಲಿನಿಕ್ ಸೇವೆ

ಕೂಲಿ ಕಾರ್ಮಿಕರು ಸೇರಿ ಜನತೆಗೆ ಗುಡ್ ನ್ಯೂಸ್: ರಾತ್ರಿ 8ರವರೆಗೆ ನಮ್ಮ ಕ್ಲಿನಿಕ್ ಸೇವೆ

ಬೆಂಗಳೂರು: ಕೂಲಿ ಕಾರ್ಮಿಕರು ಸಾಮಾನ್ಯವಾಗಿ ಉದ್ಯೋಗಿಗಳಿಗೆ ಆರೋಗ್ಯ ಸೇವೆ ದೊರಕಿಸಿಕೊಡಲು ರಾತ್ರಿ 8 ಗಂಟೆಯವರೆಗೆ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರು ಹೊರತುಪಡಿಸಿ ರಾಜ್ಯದ 30 ನಮ್ಮ ಕ್ಲಿನಿಕ್ ಗಳಲ್ಲಿ ಸಂಜೆಯ ನಂತರವೂ ಕಾರ್ಯಾಚರಣೆ ನಡೆಸಲು ಚರ್ಚೆ ನಡೆದಿದೆ. ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ನಮ್ಮ ಕ್ಲಿನಿಕ್ ಗಳ ಕಾರ್ಯಾಚರಣೆಗೆ ಸಮಯ ನಿಗದಿ ಪಡಿಸಿದ್ದು, ಈ ಅವಧಿಯಲ್ಲಿ ವೈದ್ಯರು, ಸಿಬ್ಬಂದಿ ಕಡ್ಡಾಯವಾಗಿ ಕ್ಲಿನಿಕ್ ಗಳಲ್ಲಿ ಇರಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ನಮ್ಮ ಕ್ಲಿನಿಕ್‌ ಗಳಲ್ಲಿಯೂ ಸಂಜೆ ಸೇವೆ ಆರಂಭಿಸುವ ಬಗ್ಗೆ ಸಭೆ ನಡೆಸಲಾಗುವುದು. ರಾತ್ರಿ 8 ಗಂಟೆವರೆಗೆ ನಮ್ಮ ಕ್ಲಿನಿಕ್ ಸೇವೆ ಒದಗಿಸಿದಲ್ಲಿ ಕೂಲಿ ಕಾರ್ಮಿಕರು ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular