HomeKarnatakaBIG NEWS: ಕಾಂಗ್ರೆಸ್ ಸೇರ್ತಾರಾ ಬಿ.ಸಿ. ಪಾಟೀಲ್, ರಾಜೂಗೌಡ…? ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಡಿಕೆಶಿ ಜತೆ...

BIG NEWS: ಕಾಂಗ್ರೆಸ್ ಸೇರ್ತಾರಾ ಬಿ.ಸಿ. ಪಾಟೀಲ್, ರಾಜೂಗೌಡ…? ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಡಿಕೆಶಿ ಜತೆ ಚರ್ಚೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಬರ್ತಡೇ ಪಾರ್ಟಿಯಲ್ಲಿ ರಾಜಕೀಯ ನಾಯಕರು ಭಾಗಿಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ನಾಯಕರು ಭಾಗಿಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಬಿ.ಸಿ. ಪಾಟೀಲ್, ರಾಜೂಗೌಡ ಅವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಮೂವರು ನಾಯಕರ ಚರ್ಚೆ ತೀವ್ರ ಕುತೂಹಲ ಮೂಡಿಸಿದೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೇರೆ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ನತ್ತ ಸೆಳೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ಸಿ. ಪಾಟೀಲ್ ಮತ್ತು ರಾಜೂಗೌಡ ಅವರೊಂದಿಗೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದ್ದಾರೆ. ಆದರೆ, ಅವರ ನಡುವೆ ರಾಜಕೀಯ ಹೊರತಾದ ಚರ್ಚೆಯೂ ನಡೆದಿರಬಹುದೆಂದು ಹೇಳಲಾಗಿದೆ. ಒಟ್ಟಿನಲ್ಲಿ ಮೂವರು ನಾಯಕರು ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular