ಬೆಂಗಳೂರು: ಸಚಿವರ ವಿರುದ್ಧ, ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾಯ್ತು. ಇದೀಗ ಸಚಿವರ ಸರದಿ. ಶಾಸಕರ ನಡೆ ವಿರುದ್ಧ ಸಚಿವರು ಸಿಎಂ, ಡಿಸಿಎಂ ಗೆ ದೂರು ನೀಡಿದ್ದಾರೆ.
ಶಾಸಕರ ನಡೆ ವಿರುದ್ಧ ಅಸಮಾಧಾನಗೊಂಡು ಸಚಿವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಶಾಸಕರಿಗೆ ಲಗಾಮು ಹಾಕಿ. ಹೊಸ ಶಾಸಕರು ಪಕ್ಷದ ಚೌಕಟ್ಟಿನಲ್ಲಿ ಇಲ್ಲ. ಬಹಿರಂಗವಾಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.
ಮಾಧ್ಯಮಗಳ ಎದುರು ಸಚಿವರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ಕೊಡುತ್ತಿದ್ದಾರೆ. ಹೀಗೆ ಮುಂದುವರೆದರೆ ನೂತನ ಶಾಸಕರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಎಚ್ಚರಿಸಿದ್ದಾರೆ.
ಶಾಸಕರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಶಿವಗಂಗಾ ಬಸವರಾಜ್ ವಿರುದ್ಧ ದೂರು ನೀಡಿದ್ದಾರೆ. ಹೊಸ ಶಾಸಕರನ್ನು ಕರೆದು ಬುದ್ಧಿಹೇಳಿ ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷೀಯ ಸಚಿವರ ಹಾಗೂ ಶಾಸಕರ ನಡುವೆಯೇ ಆಂತರಿಕ ಕಲಹ ಆರಂಭವಾದಂತಿದೆ.