
ಇಂದು ಧಿಡೀರ್ ಆಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಎದೆ ಸೋಂಕಿನ ಹಿನ್ನೆಲೆ ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ, ಕಾಶ್ಮೀರದ ಶ್ರೀನಗರ ಪ್ರವಾಸದಿಂದ ಹಿಂದಿರುಗಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

