HomeKarnatakaವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಬಂಧಿತನಾದವನ ಮೊಬೈಲ್ ನಲ್ಲಿ ಹಲವು ಮಹಿಳೆಯರ ಖಾಸಗಿ ಕ್ಷಣದ...

ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಬಂಧಿತನಾದವನ ಮೊಬೈಲ್ ನಲ್ಲಿ ಹಲವು ಮಹಿಳೆಯರ ಖಾಸಗಿ ಕ್ಷಣದ ದೃಶ್ಯ

ಬೆಂಗಳೂರು: ಜಾಲತಾಣಗಳಲ್ಲಿ ವಿವಾಹಿತೆಯರನ್ನು ಪರಿಚಯಿಸಿಕೊಂಡು ನಂತರ ದೈಹಿಕ ಸಂಪರ್ಕ ಬೆಳೆಸಿ ಖಾಸಗಿ ಕ್ಷಣದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಫೈಸಲ್(26) ಬಂಧಿತ ಆರೋಪಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಇನ್ಸ್ಟಾಗ್ರಾಮ್ ಮೂಲಕ ಮಹಿಳೆಯೊಬ್ಬರನ್ನು ಪರಿಚಯಿಸಿಕೊಂಡು ಪ್ರೀತಿಸುವ ನಾಟಕ ಮಾಡಿದ್ದ. ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗೊತ್ತಾಗದಂತೆ ಮೊಬೈಲ್ ನಲ್ಲಿ ಖಾಸಗಿ ಕ್ಷಣದ ವಿಡಿಯೋ ಮಾಡಿಕೊಂಡಿದ್ದ. ಕೆಲವು ತಿಂಗಳುಗಳ ಹಿಂದೆ ಚೆನ್ನೈಗೆ ಹೋಗಿ ಕೆಲಸಕ್ಕೆ ಸೇರಿದ್ದ ಆರೋಪಿ ಮಹಿಳೆಗೆ ಕರೆ ಮಾಡಿ ಚೆನ್ನೈಗೆ ಬರುವಂತೆ ಹೇಳಿದ್ದಾನೆ. ಇಲ್ಲವಾದಲ್ಲಿ ಪತಿ ಮತ್ತು ಸ್ನೇಹಿತರಿಗೆ ವಿಡಿಯೋ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಮಹಿಳೆಯನ್ನು ಚೆನ್ನೈಗೆ ಕರೆದುಕೊಂಡು ಹೋದ ಪೊಲೀಸರು ಆಕೆಯಿಂದಲೇ ಆರೋಪಿಗೆ ಕರೆ ಮಾಡಿಸಿ ಮಹಿಳೆ ತಿಳಿಸಿದ ಜಾಗಕ್ಕೆ ಬಂದ ಆರೋಪಿಯನ್ನು ಬಂಧಿಸಲಾಗಿದೆ. ಫೈಸಲ್ ಹಲವು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ಆರೋಪಿ ಮೊಬೈಲ್ ನಲ್ಲಿ ಹಲವು ಮಹಿಳೆಯರ ಜೊತೆಗಿನ ಲೈಂಗಿಕ ದೃಶ್ಯದ ವಿಡಿಯೋಗಳು ಪತ್ತೆಯಾಗಿವೆ. ಆತನ ಮೊಬೈಲ್ ಜಪ್ತಿ ಮಾಡಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular