ಕಲಬುರಗಿ : 2023-24ನೇ ಸಾಲಿಗೆ ಕಲಬುರಗಿ ಜಿಲ್ಲಾ ಪಂಚಾಯತಿಯ ಕೈಗಾರಿಕಾ ವಿಭಾಗದಿಂದ ಜಿಲ್ಲಾ ವಲಯ ಯೋಜನೆಯಡಿ ಉಚಿತ ವಿದ್ಯುತ್ ಚಾಲಿತ ಹೊಲಿಗೆಯಂತ್ರ ಪಡೆಯಲು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಹೊಲಿಗೆ ವೃತ್ತಿನಿರತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳಾ ಅಭ್ಯರ್ಥಿ ಮಾತ್ರ ಅರ್ಜಿ ಸಲ್ಲಿಸಬೇಕು. ದಿ.01-09-2023ಕ್ಕೆ ಅಭ್ಯರ್ಥಿಯ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿರಬೇಕು. ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಸರ್ಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರವನ್ನು ಪಡೆದಿರುವ ಫಲಾನುಭವಿಗಳು, ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ (ಗ್ರಾ.ಕೈ) ಅಬ್ದುಲ್ ಅಜೀಮ್ ಅವರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಮಹಿಳೆಯರು https://kalaburagi.nic.in ಅಥವಾ https://zpkalaburagi.karnataka.gov.in ವೆಬ್ಸೈಟ್ನಲ್ಲಿ ಅವಶ್ಯ ಮಾಹಿತಿಯನ್ನು ಭರ್ತಿ ಮಾಡಿ, ಸಂಬಂಧಿಸಿದ ಪೂರಕ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ಅಪಲೋಡ್ ಮಾಡುವ ಮೂಲಕ 2023ರ ಸೆಪ್ಟೆಂಬರ್ 31 ರೊಳಗಾಗಿ ಆನ್ಲೈನ್ದಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸದರಿ ವೆಬ್ಸೈಟ್ ಅಥವಾ ಉಪನಿರ್ದೇಶಕರು (ಗ್ರಾಮೀಣ ಕೈಗಾರಿಕೆ), ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೈಗಾರಿಕಾ ವಿಭಾಗ, ಜಿಲ್ಲಾ ಪಂಚಾಯತ, ಎಲ್-10, ಕೈಗಾರಿಕಾ ವಸಾಹತು, ಸಾಗರ ಮಾರ್ಬಲ್ಸ್ ಎದುರುಗಡೆ, ಜೇವರ್ಗಿ ಕ್ರಾಸ್ ಹತ್ತಿರ, ಕಲಬುರಗಿ-585102 ಕಚೇರಿಯನ್ನು, ದೂ.ಸಂ.08472-221784, 295784 ಅಥವಾ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.