‘ಚಂದ್ರಯಾನ-3’ ಆಯ್ತು ಈಗ ಸನಾತನ ಧರ್ಮದ ವಿರುದ್ಧ ನಟ ಪ್ರಕಾಶ್ ರಾಜ್ ಟ್ವೀಟ್ : ನೆಟ್ಟಿಗರಿಂದ ಫುಲ್ ಕ್ಲಾಸ್

ಸನಾತನ ಧರ್ಮದ ನಿರ್ಮೂಲನೆ ಕುರಿತ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ-ವಿರೋಧ ಚರ್ಚೆಯಾಗುತ್ತಿದೆ. ಇದರ ನಡುವೆ ನಟ ಪ್ರಕಾಶ್ ರಾಜ್  ಸನಾತನ ಧರ್ಮದ ವಿರುದ್ಧ ಟ್ವೀಟ್ ಮಾಡಿದ್ದು, ನೆಟ್ಟಿಗರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆ ವೇಳೆ ಸಂಸತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಹಿಂದು ಸಂತರ ಜತೆ ತೆಗೆಸಿಕೊಂಡಿರುವ ಫೋಟೊವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಪ್ರೀತಿಯ ಪ್ರಜೆಗಳೇ… ಇದು ಭವಿಷ್ಯದ ಸಂಸತ್ತು. ತನಾತನಿ (ಸನಾತನಿ) ಸಂಸತ್ತು. ನಿಮಗಿದು ಒಪ್ಪಿಗೆಯೇ?” ಎಂದು ಪ್ರಶ್ನಿಸಿದ್ದಾರೆ.
ಶನಿವಾರ ‘ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಗಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು’ ಎಂದು ಉದಯನಿಧಿ ಹೇಳಿದ್ದರು. ಈ ಬೆನ್ನಲ್ಲೇ ಇದರ ನಡುವೆ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

ನಟ ಪ್ರಕಾಶ್ ರಾಜ್ ಟ್ವೀಟ್ ಗೆ ವಿವಿಧ ರೀತಿಯ ಕಮೆಂಟ್ ಗಳು ಬರುತ್ತಿದೆ. ಮೊಘಲರು ಸನಾತನ ಧರ್ಮವನ್ನು ಅಳಿಸಲು ಯತ್ನಿಸಿದರೂ ಆಗಲಿಲ್ಲ. ನಿಮ್ಮಿಂದ ಏನಾಗುತ್ತದೆ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

https://twitter.com/prakashraaj/status/1698553162393612535?ref_src=twsrc%5Etfw%7Ctwcamp%5Etweetembed%7Ctwterm%5E1698553162393612535%7Ctwgr%5E13ddf84bf0073ea09ac9877d14ee2c1eab94f663%7Ctwcon%5Es1_&ref_url=https%3A%2F%2Fvistaranews.com%2Fnational%2Fprakash-raj-pitches-sanatani-parliament-shares-modi-photo-with-seers%2F444338.html

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read