HomeKarnatakaಜನರಿಗೆ ಗೊತ್ತಾಗಲಿ ಎಂದೇ ಪತ್ರ ಬಿಡುಗಡೆ; ನನ್ನ ಪತ್ರದಿಂದ ಈಗ ಜೆಸ್ಕಾಂ ಸಮಸ್ಯೆಗೆ ಪರಿಹಾರ ಸಿಗಲಿದೆ...

ಜನರಿಗೆ ಗೊತ್ತಾಗಲಿ ಎಂದೇ ಪತ್ರ ಬಿಡುಗಡೆ; ನನ್ನ ಪತ್ರದಿಂದ ಈಗ ಜೆಸ್ಕಾಂ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಶಾಸಕ ಬಸವರಾಜ್ ರಾಯರೆಡ್ದಿ

ಧಾರವಾಡ: ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಬಸವರಾಜ್ ರಾಯರೆಡ್ಡಿ, ನನ್ನ ಪತ್ರದಿಂದಾಗಿ ಇಂಧನ ಸಚಿವರು ಜೆಸ್ಕಾಮ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಮಸ್ಯೆ ಪರಿಹಾರವಾಗುತ್ತಿದೆ ಎಂದು ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಯರೆಡ್ದಿ, ಜನರಿಗೆ ಗೊತ್ತಾಗಲಿ ಎಂದೆ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡಿದ್ದೇನೆ. ನನ್ನ ಪತ್ರದಿಂದಾಗಿ ಸೆ.5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಜೆಸ್ಕಾಂ ಸಮಸ್ಯೆಗೆ ಪರಿಹಾರ ಸಿಗಲಿದೆ. ಇದನ್ನು ನಕಾರಾತ್ಮಕವಾಗಿ ತೆಗೆದುಕೊಂಡರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತದ್ದು ಏನೂ ಇಲ್ಲ, ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದೂ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ನನ್ನ ಕ್ಷೇತ್ರದಲ್ಲಿ ಟ್ರಾನ್ಸ್ ಫಾರ್ಮರ್ ಸುಟ್ಟು ಹೋಗಿ ಸಮಸ್ಯೆಯಾಗಿದೆ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಹೇಳಿದರೂ ಯಾವುದೇ ಗಮನ ಹರಿಸುತ್ತಿಲ್ಲ. ಕಲಬುರ್ಗಿ ಜಿಲ್ಲೆ ವ್ಯಾಪ್ತಿಗೆ ನಮ್ಮ ಕ್ಷೇತ್ರ ಬರುತ್ತೆ. ಆದರೆ ಯಾವ ಅಧಿಕಾರಿಗಳೂ ಬರುತ್ತಿಲ್ಲ, ಅಧಿಕಾರಿಗಳು ಮಾತು ಕೇಳುತ್ತಿಲೂ ಇಲ್ಲ. ಹಾಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹೇಳಬೇಕಾಯಿತು. ಈಗ ಸಮಸ್ಯೆ ಪರಿಹಾರವಾಗುತ್ತಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular