ವಿದ್ಯಾರ್ಥಿಗಳ ಗಮನಕ್ಕೆ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಮಾಹಿತಿ

ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಗಳನ್ನು ನೀಡಲಾಗುವುದು.

ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಆಫ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನಿಮ್ಮ ಜಿಲ್ಲೆಯ ಕಾರ್ಮಿಕ ಅಧಿಕಾರಿ, ಉಪ ವಿಭಾಗ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಸೂಚಿಸುತ್ತಿರುವ ಎಲ್ಲಾ ದಾಖಲೆಗಳ ಪ್ರತಿಗಳನ್ನು ಕೂಡ ಲಗ್ಗತ್ತಿಸಬೇಕು.

ಏನೆಲ್ಲಾ ದಾಖಲೆ ಬೇಕು

1) ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿ
2) ಕುಟುಂಬದ ರೇಷನ್ ಕಾರ್ಡ್
3)ಕಾರ್ಮಿಕರ ಮತ್ತು ವಿದ್ಯಾರ್ಥಿಯ ಆಧಾರ್ ಕಾರ್ಡ್
4) ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ  ಹಾಗೂ 2022-23 ಸಾಲಿನಲ್ಲಿ PUC ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read